ಕಾರ್ಕಳ : ವಿಷ್ಣುವಿನ ನಾಮ ಪಠಿಸುವುದರಿಂದ ವ್ಯಕ್ತಿಯ ಜೀವನದಲ್ಲಿ ಸಮೃದ್ಧಿ ಪ್ರಾಪ್ತವಾಗುವುದು. ಮಹಾವಿಷ್ಣುವಿನ ಉಪಾಸನೆ ಮಾಡಿದರೆ ಎಲ್ಲ ಬಯಕೆ ಸಿದ್ಧಿಸುವುದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಕಾರ್ಯಕಾರಿಣಿ ಮಂಡಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು.
ಅವರು ಫೆ. 2ರಂದು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಷ್ಣು ಸಹಸ್ರನಾಮ ಪಠಣ ಸಂದರ್ಭ ಉಪನ್ಯಾಸ ನೀಡಿದರು. ಸೇವಾಭಾರತಿ ಕಾರ್ಕಳ ಕಾರ್ಯದರ್ಶಿ ವಿಘ್ನೇಶ್ ಪಾಠಕ್ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲಾ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಮುಖ್ಯಶಿಕ್ಷಕಿ ಸುರೇಖಾ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಆಶಾ ಕಾರ್ಯಕ್ರಮ ನಿರೂಪಿಸಿದರು. ಪ್ರಮೋದ ವಂದಿಸಿದರು.
