Tuesday, May 17, 2022
spot_img
Homeರಾಜ್ಯಚಿತ್ರಮಂದಿರ, ಜಿಮ್ ನಲ್ಲಿ ಶೇ.100 ಭರ್ತಿಗೆ ಸಮ್ಮತಿ

ಚಿತ್ರಮಂದಿರ, ಜಿಮ್ ನಲ್ಲಿ ಶೇ.100 ಭರ್ತಿಗೆ ಸಮ್ಮತಿ

ಬೆಂಗಳೂರು: ಕೊರೊನಾ, ಓಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ರಾಜ್ಯ ಸರ್ಕಾರ ಸಡಿಲ ಗೊಳಿಸಿದ್ದು, ಚಿತ್ರಮಂದಿರ ಮತ್ತು ಜಿಮ್ ಗಳಿಗೆ ಹೇರಲಾಗಿದ್ದ ಶೇ.50ರಷ್ಟು ಆಕ್ಸುಪೆನ್ಸಿ ನಿರ್ಬಂಧವನ್ನು ತೆರವುಗೊಳಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯಿಂದಲೇ ಥಿಯೇಟರ್‌ ಮತ್ತು ಜಿಮ್ ಭರ್ತಿಗೆ ಸರ್ಕಾರ ಅನುಮತಿ ನೀಡಿದ್ದು, ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿ ಪಡೆದುಕೊಂಡಿರಬೇಕು, ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಚಿತ್ರಮಂದಿರದಲ್ಲಿ ಕಟ್ಟುನಿಟ್ಟಿನ ಪರಿಶೀಲನೆ ಅಗತ್ಯ ಎಂದು ಸೂಚನೆ ನೀಡಲಾಗಿದೆ.
ಆರೋಗ್ಯ ಸಚಿವ ಕೆ. ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿ, ಡಿಸೆಂಬರ್ ಕೊನೆ ವಾರದಲ್ಲಿ ಓಮಿಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕೆಲ ಕ್ರಮ ತೆಗೆದುಕೊಂಡಿದ್ದೇವೆ. ನೈಟ್ ಕರ್ಫ್ಯೂ, ವೀಕೆಂಡ್ ಸೇರಿದಂತೆ ಹಲವು ನಿಯಮಗಳನ್ನು ಹಿಂದೆ ತೆಗೆದುಕೊಂಡಿದ್ದೆವು. ಇಂದು ಆಸ್ಪತ್ರೆ ದಾಖಲಾತಿ ಶೇ.5 ರಿಂದ ಶೇ.32ಕ್ಕೆ ಇಳಿಕೆಯಾಗಿದೆ. ನಾಳೆಯಿಂದ ಚಲನ ಚಿತ್ರಮಂದಿರಗಳಿಗೆ ರಿಲ್ಯಾಕ್ಸ್ 100% ವಿನಾಯ್ತಿ ಥಿಯೇಟರ್‍ಗಳಿಗಿದ್ದು, 50% ನಿಯಮ ಸಡಿಲಿಸಿ, ಜಿಮ್, ಈಜುಕೊಳ, ಯೋಗ ಕೇಂದ್ರಗಳಿಗೂ 100% ಭರ್ತೀಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!