Saturday, May 21, 2022
spot_img
HomeUncategorizedಉಡುಪಿ ಹಿಜಾಬ್ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಉಡುಪಿ ಹಿಜಾಬ್ ಪ್ರಕರಣ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಬೆಂಗಳೂರು: ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಫೆ.೪ ರಂದು ನೋಟಿಸ್ ಜಾರಿ ಮಾಡಿದೆ.
ವಿದ್ಯಾರ್ಥಿನಿಯರಾದ ಆಯೇಷಾ, ಹಜೀರಾ, ಅಲ್ಮಾಸ್ ಮತ್ತಿತರರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಮನವಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಉಡುಪಿ ಶಾಸಕ ರಘುಪತಿ ಭಟ್ ಅವರು ಕಾನೂನುಬಾಹಿರವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದ್ದು ಅವರನ್ನೂ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ. ಪ್ರಾಂಶುಪಾಲ, ಉಪ ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಈ ಮಧ್ಯೆ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಅವರು ಪ್ರತ್ಯೇಕವಾಗಿ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಅಡ್ವೊಕೇಟ್ ಜನರಲ್ ಅವರು ಪ್ರಕರಣದ ಸಂಬಂಧ ವಾದಿಸಲು ಬಯಸಿದ್ದಾರೆ. ಎರಡೂ ಪ್ರಕರಣಗಳನ್ನು ಒಟ್ಟಾಗಿ ಆಲಿಸಲಾಗುವುದು ಎಂದು ಪೀಠ ಹೇಳಿಕೆ ನೀಡಿ ವಿಚಾರಣೆ ಮುಂದೂಡಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!