ನವದೆಹಲಿ: ಜನವರಿ 26ರಂದು ದೆಹಲಿಯ ಇಂಡಿಯಾ ಗೇಟ್ನಿಂದ ರಾಜಪಥ ವರಗೆ ನಡೆದಿದ್ದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ.
ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಫೆ.4 ರಂದು ಪ್ರಶಸ್ತಿ ಘೋಷಿಸಿದ್ದು, ಕರಕುಶಲ ಕಲೆಯ ವೈಭವವನ್ನು ಬಿಂಬಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ಲಭ್ಯವಾಗಿದೆ.
ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದ್ದು, ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನಕ್ಕೆ ಪಾತ್ರವಾಗಿದೆ. ಅಂತೆಯೇ ‘ವಂದೇ ಭಾರತಮ್’ ನೃತ್ಯ ತಂಡವು ವಿಶೇಷ ಬಹುಮಾನ ಪಡೆದಿದ್ದು, ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿ ಭಾಗವಹಿಸಿದ್ದರು.
ಗಣರಾಜ್ಯೋತ್ಸವ ಪರೇಡ್: ಕರ್ನಾಟಕದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
Recent Comments
ಕಗ್ಗದ ಸಂದೇಶ
on