Tuesday, July 5, 2022
spot_img
HomeUncategorizedಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್‌ಐಟಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿದ ಎಸ್‌ಐಟಿ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಸಿಲುಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ವಿಶೇಷ ತನಿಖಾದಳ ಕ್ಲೀನ್ ಚಿಟ್ ನೀಡಿದೆ. ನಿನ್ನೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಎಸ್ಐಟಿಯಿಂದ ತನಿಖಾ‌ವರದಿ ಸಲ್ಲಿಕೆ ಮಾಡಲಾಗಿದೆ.
ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಆರೋಪಿಸಿದ್ದು ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಜಿಪಿ ಸೋಮೆಂದು ಮುಖರ್ಜಿ ನೇತೃತ್ವದಲ್ಲಿ ಎಸ್ಐಟಿ ಯಿಂದ ನಡೆದ ತನಿಖೆ ನಡೆಸಲಾಗಿತ್ತು. ತನಿಖೆ ಪೂರ್ಣಗೊಂಡಿದ್ದು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದ್ದು, ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಲಾಗಿದೆ.
ಎಸ್ಐಟಿ ಒಟ್ಟು 150 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಹಲವು ವಿಚಾರಗಳನ್ನು ತಿಳಿಸಿದೆ.
ಇಬ್ಬರ ನಡುವೆ ಒಮ್ಮತದಿಂದ ಲೈಂಗಿಕ ಕ್ರಿಯೆ ನಡೆದಿದೆ. ಯುವತಿ ಮತ್ತು ರಮೇಶ್ ಜಾರಕಿಹೊಳಿ ಮಾತನಾಡಿರುವ ಆಡಿಯೋದಲ್ಲಿ ಸಹಜವಾಗಿ ಮಾತನಾಡಿರುವುದು ಕಂಡು ಬಂದಿದೆ. ಬಿಡುಗಡೆಗೊಂಡ ವಿಡಿಯೋ ಎಡಿಟ್ ಮಾಡಲಾಗಿದೆ. ಇನ್ನೂ ಪ್ರಕರಣದಲ್ಲಿ ಕೇಳಿ ಬಂದಿರುವ ಆರೋಪಿಗಳು ಬ್ಲ್ಯಾಕ್ ಆಂಡ್ ವೈಟ್ ದಂಧೆಯಲ್ಲಿ ಭಾಗಿಯಾಗಿರೋದು ತನಿಖೆಯಲ್ಲಿ ತಿಳಿದು ಬಂದಿದೆ
ಉದ್ಯೋಗ ನೀಡುವ ಆಮಿಷವೊಡ್ಡಿ ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಯುವತಿ ಹೇಳಿಕೆ ದಾಖಲಿಸಿದ್ದು, ಈ ಸಂಬಂಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!