ಬಾಗಲಕೋಟೆ: ಸರ್ವಧರ್ಮ ಸಮನ್ವಯದ ಪ್ರವಚನಕಾರರು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ ಅವರು ಜ.5 ರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ ಕಬೀರ, ಮಹಾಲಿಂಗಪುರದ ಇಬ್ರಾಹಿಂ ಸುತಾರ ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ತಂದೆ ನಬಿಸಾಹೇಬ್ ಮತ್ತು ತಾಯಿ ಅಮೀನಾಬಿಯವರ ಮಗನಾಗಿ ಬಡ ಕುಟುಂಬದಲ್ಲಿ ಇಬ್ರಾಹಿಂ ಸುತಾರ 1940ರ ಮೇ 10ರಂದು ಜನಿಸಿದರು. ಇವರ ಇವರ ತಂದೆ ಬಡಗಿ ವೃತ್ತಿಯನ್ನು ಮಾಡಿಕೊಂಡಿದ್ದು, ಬಡ ಕುಟುಂಬದಲ್ಲಿ ಜನಿಸಿದ ಇಬ್ರಾಹಿಂ ಸುತಾರ ಅವರಿಗೆ ಶಿಕ್ಷಣ ಪಡೆಯಲು ಸಾದ್ಯವಾಗಲಿಲ್ಲ.
ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ನಿಧನ
Recent Comments
ಕಗ್ಗದ ಸಂದೇಶ
on