Tuesday, July 5, 2022
spot_img
HomeUncategorizedಸಹಕಾರ ಇಲಾಖೆಯಲ್ಲಿ 3 ಸಾವಿರ ಹುದ್ದೆ ಭರ್ತಿಗೆ ನೋಟಿಫಿಕೇಷನ್‌ - ಎಸ್‌.ಟಿ. ಸೋಮಶೇಖರ್‌

ಸಹಕಾರ ಇಲಾಖೆಯಲ್ಲಿ 3 ಸಾವಿರ ಹುದ್ದೆ ಭರ್ತಿಗೆ ನೋಟಿಫಿಕೇಷನ್‌ – ಎಸ್‌.ಟಿ. ಸೋಮಶೇಖರ್‌

ಮೈಸೂರು : ಸಹಕಾರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮಕೈಗೊಂಡಿದ್ದು, 3 ಸಾವಿರ ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್ ಹೊರಡಿಸಲಾಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಅವರು ಫೆ.4‌ ರಂದು ಮೈಸೂರು ಡಿಸಿಸಿ ಬ್ಯಾಂಕ್ ಶಾಖೆಯ ಕಟ್ಟಡ ನಿರ್ಮಾಣ ಹಾಗೂ ನಂದಿನಿ ಮಿಲ್ಕ್ ಗ್ಯಾಲಕ್ಸಿ ಮತ್ತು ನಂದಿನಿ ಕೆಫೆ ಶಂಕುಸ್ಥಾಪನೆ ಸಮಾರಂಭದಲ್ಲಿ ತಿಳಿಸಿದರು.
ದೇಶ ವಿದೇಶಗಳ ನಾನಾ ಭಾಗಗಳಿಗೆ ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ನಂದಿನಿ ಹಾಲು ಕೂಡ ಅನ್ಯ ರಾಜ್ಯಗಳಿಗೆ ಹೋಗುತ್ತದೆ. ಹೀಗಾಗಿ ನಂದಿನಿ ಬ್ರ್ಯಾಂಡ್‌ಗೆ ಕಳಂಕ ತರುವವರನ್ನು ಹಾಗೂ ನಂದಿನಿ ಪದಾರ್ಥಗಳನ್ನು ನಕಲಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಬಲಪಡಿಸಲು ಮುಂದಾಗಿದ್ದೇವೆ. ಈ ಅವಕಾಶವನ್ನು ಗ್ರಾಮೀಣ ಸಹಕಾರಿಗಳು ಬಳಸಿಕೊಳ್ಳುವಂತಾಗಬೇಕು ಎಂದು ಕುಶಾಲನಗರ ತಾಲೂಕಿನ ಹೆಬ್ಬಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ತಿಳಿಸಿದರು. ರಾಜ್ಯದಲ್ಲಿ 5,400 ಸಹಕಾರ ಸಂಘಗಳಿದ್ದು, ಈ ಸಂಘಗಳಲ್ಲಿ ಒಂದೇ ತಂತ್ರಾಂಶ ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಯೋಚಿಸಿದ್ದೇವೆ. ರಾಜ್ಯದಲ್ಲಿ ಸುಮಾರು 20 ಲಕ್ಷ ರೈತರಿಗೆ ಸಹಕಾರ ಸಂಘಗಳ ಮೂಲಕ 14 ಸಾವಿರ ಕೋಟಿ ಸಾಲ ವಿತರಣೆ ಮಾಡಲಾಗಿದೆ. ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಆ ದಿಸೆಯಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಸೋಮಶೇಖರ್‌ ಹೇಳಿದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!