ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರನ್ನು ಶನಿವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಅಭಿನಂದಿಸಲಾಯಿತು. ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅಣ್ಣು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೃತಿ ಹಸ್ತಾಂತರ
ಪತ್ರಕರ್ತ ಮನೋಹರ್ ಪ್ರಸಾದ್ ಅವರು ತನ್ನ ನೂತನ ಕೃತಿ “ಮನೋಹರ ಭಾವ ಚಿತ್ರ ಯಾನ”ವನ್ನು ಸಚಿವರಿಗೆ ನೀಡಿದರು. ಈ ವೇಳೆ ಕೃತಿಯ ಕುರಿತು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
