Tuesday, July 5, 2022
spot_img
HomeUncategorizedಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ನೀಡಲಿ: ಸಚಿವ ಸುನಿಲ್ ಕುಮಾರ್

ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶ ನೀಡಲಿ: ಸಚಿವ ಸುನಿಲ್ ಕುಮಾರ್

ಮಂಗಳೂರು: ಹಿಜಾಬ್ ವಿವಾದ ವ್ಯವಸ್ಥಿತ ಷಡ್ಯಂತ್ರ. ಹಿಜಾಬ್, ಬುರ್ಖಾ ಇತ್ಯಾದಿಗಳನ್ನು ಮುಸಲ್ಮಾನ ಹೆಣ್ಣುಮಕ್ಕಳು ಮನೆಯಿಂದ ಶಾಲಾ-ಕಾಲೇಜು ಕಂಪೌಂಡ್ ವರೆಗೆ ಹಾಕಿಕೊಂಡು ಬರಲಿ, ಅದಾದ ನಂತರ ತರಗತಿಗಳಲ್ಲಿ ಕುಳಿತುಕೊಳ್ಳುವಾಗ ಎಲ್ಲಾ ವಿದ್ಯಾರ್ಥಿಗಳಂತೆಯೇ ಸಮವಸ್ತ್ರದಲ್ಲಿ ಕುಳಿತುಕೊಳ್ಳುವುದು ಸಂಪ್ರದಾಯ ಎಂದು ಇಂಧನ ಮತ್ತು ಕನ್ನಡ-ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಕಳ ಹೇಳಿದ್ದಾರೆ.
ಉಡುಪಿಯ ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು ಧರಿಸುವ ವಿವಾದಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಬೇಕೆಂದು ಕೆಲವರು ವಿದ್ಯಾರ್ಥಿಗಳನ್ನು ಛೂಬಿಟ್ಟು ಈ ರೀತಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದರು.
ಹಿಜಾಬ್ ಹಾಕುವುದು ವ್ಯಕ್ತಿ ಸ್ವಾತಂತ್ರ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೆಲವು ಸಂಘಟನೆಗಳು ಬೊಬ್ಬಿಡುತ್ತಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿಯೊಳಗೆ ಮಹಿಳೆಯರಿಗೆ ಪ್ರವೇಶ ನೀಡಲಿ ನೋಡೋಣ ಎಂದು ಹೇಳಿದರು. ಒಂದು ಕಡೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವವರು ಮತ್ತೊಂದು ಕಡೆ ಶಾಲಾ-ಕಾಲೇಜುಗಳಿಗೆ ಹೀಗೆ ಬಟ್ಟೆ ಧರಿಸಿಕೊಂಡು ಬರಬೇಕು ಎಂದು ಹೇಳುವುದನ್ನು ಯಾವುದೇ ಕಾರಣಕ್ಕೂ ಸರ್ಕಾರ ಸಹಿಸುವುದಿಲ್ಲ ಎಂದರು.
ವಸ್ತ್ರಸಂಹಿತೆ ಸಂಪ್ರದಾಯ:
ನಮ್ಮ ರಾಜ್ಯದಲ್ಲಿ ವಸ್ತ್ರಸಂಹಿತೆ ಶಾಲಾ-ಕಾಲೇಜುಗಳಲ್ಲಿ ಸಾಂಪ್ರದಾಯಿಕವಾಗಿ ಬಂದಿದೆ. ತ್ರಿವಳಿ ತಲಾಖ್ ನ್ನು ರದ್ದು ಮಾಡುವ ಮೂಲಕ ಮುಸ್ಲಿಂ ಮಹಿಳೆಯರಿಗೆ ಮೋದಿ ಸರ್ಕಾರ ಭದ್ರತೆಯನ್ನು ಕೊಟ್ಟಿದೆ. ಇದನ್ನು ಅರ್ಥ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವುದಕ್ಕೆ ಮುಸ್ಲಿಂ ಮಹಿಳೆಯರು ಪ್ರಯತ್ನ ಮಾಡಬೇಕು ಎಂದರು.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!