ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಮಣಿಸಿ ಅಂಡರ್-19 ವಿಶ್ವಕಪ್ ಗೆದ್ದಿದೆ. ಆಂಟಿಗುವಾದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ತಂಡವು 5ನೇ ಬಾರಿಗೆ ವಿಶ್ವ ಚಾಂಪಿಯನ್ ಆಯಿತು. ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 44.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು 189 ರನ್ ಗಳಿಸಿತು. ಭಾರತ 47.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಈ ಮೂಲಕ 5ನೇ ಬಾರಿ ವಿಶ್ವ ಚಾಂಪಿಯನ್ ಪಟ್ಟ ಧರಿಸುವ ಮೂಲಕ ದಾಖಲೆ ಬರೆಯಿತು.
Recent Comments
ಕಗ್ಗದ ಸಂದೇಶ
on