ಮುಂಬೈ : ಗಾನಕೋಗಿಲೆ ಲತಾ ಮಂಗೇಶ್ಕರ್ (92 ವ.) ಫೆ.6 ರಂದು ನಿಧನರಾಗಿದ್ದಾರೆ. ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಸೌಮ್ಯ ಲಕ್ಷಣ ಕಂಡುಬಂದು ಜ.8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ..
ಭಾರತೀಯ ಚಿತ್ರರಂಗದ ಶ್ರೇಷ್ಠ ಗಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಮಂಗೇಶ್ಕರ್ ಅವರು 1942ರಲ್ಲಿ 13 ನೇ ವಯಸ್ಸಿನಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಭಾರತದ ನೈಟಿಂಗೇಲ್(ಗಾನ ಕೋಗಿಲೆ) ಎಂದು ಬಿರುದನ್ನು ಪಡೆದಿರುವ ಲತಾ ಮಂಗೇಶ್ಕರ್ ಪದ್ಮಭೂಷಣ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ಅವರು ಹಾಡಿದ ‘ಲಗ್ ಜಾ ಗಲೇ’, ‘ಯೇ ಗಲಿಯಾನ್ ಯೇ ಚೌಬಾರಾ’, ‘ಪ್ಯಾರ್ ಕಿಯಾ ತೊ ಡರ್ನಾ ಕ್ಯಾ’, ‘ಬಹೋನ್ ಮೇ ಚಲೇ ಆವೋ’, ‘ವೀರ್ ಜರಾ’ದ ‘ತೇರೆ ಲಿಯೇ’ ಮತ್ತು ಇನ್ನೂ ಅನೇಕ ಹಾಡುಗಳು ಜನಪ್ರಿಯವಾಗಿವೆ.
ಮುಂಬೈ : ‘ಗಾನಕೋಗಿಲೆ’ ಲತಾ ಮಂಗೇಶ್ಕರ್ ಅಸ್ತಂಗತ
Recent Comments
ಕಗ್ಗದ ಸಂದೇಶ
on