ನಿಟ್ಟೆ : ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜು ಹಾಗೂ ಪಿಯು ಕಾಲೇಜುಗಳ ನೂತನ ಕಟ್ಟಡವನ್ನು ನಿಟ್ಟೆ ಬಿ.ಸಿ ಆಳ್ವ ಕ್ರೀಡಾ ಸಂಕೀರ್ಣದ ಬಳಿಯಲ್ಲಿ ನಿರ್ಮಿಸಲಾಗಿದ್ದು ಫೆ.7 ರಂದು ಉದ್ಘಾಟನೆಗೊಳ್ಳಲಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಸುಬ್ರಹ್ಮಣ್ಯ ಯಾಡಪಡಿಥಯ, ಉಡುಪಿ ಜಿಲ್ಲೆಯ ಡಿ.ಡಿ. ಪಿ.ಯು ಮಾರುತಿ ಅವರು ಉಪಸ್ಥಿತರಿರುವರು ಮತ್ತು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಪತಿ ಶ್ರೀ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on