ಕಾರ್ಕಳ : ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಸ್ವಯಂ ಆತ್ಮರಕ್ಷಣಾ ಕೌಶಲ್ಯಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಫೆ. ೭ ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೆಸರಿನಲ್ಲಿಯೇ ಶಕ್ತಿ ತುಂಬಲು ಒನಕೆ ಓಬವ್ವನ ಹೆಸರಿಡಲಾಗಿದೆ. ಆತ್ಮ ರಕ್ಷಣೆ ಪ್ರತಿಯೊಂದು ಜೀವ ಸಂಕುಲದ ಮೊದಲ ಆದ್ಯತೆ. ಮಾನವರ ಆತ್ಮರಕ್ಷಣೆಗೆ ಬೇಕಾಗಿರುವುದು ಆತ್ಮವಿಶ್ವಾಸ. ಯಾವ ವ್ಯಕ್ತಿಗೆ ಆತ್ಮವಿಶ್ವಾಸ ಇರುತ್ತದೆಯೋ ಅವನು ತನ್ನ ಆತ್ಮ ರಕ್ಷಣೆಯನ್ನು ಸಮರ್ಥವಾಗಿ ಮಾಡಲು ಸಾಧ್ಯ ಎಂದರು. ಓಬವ್ವ ಆತ್ಮರಕ್ಷಣೆ ಯೋಜನೆಯನ್ವಯ ಒಟ್ಟು 1704 ಹಾಸ್ಟೆಲ್ ಮತ್ತು ವಸತಿ ಶಾಲೆಗಳ 1.82 ಲಕ್ಷ ಹೆಣ್ಣು ಮಕ್ಕಳು ಆತ್ಮರಕ್ಷಣೆ ಕಲೆಯ ತರಬೇತಿ ಪಡೆಯಲಿದ್ದಾರೆ ಎಂದು ತಿಳಿಸಿದರು.
Recent Comments
ಕಗ್ಗದ ಸಂದೇಶ
on