ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5.96 ಕೋಟಿ ರೂ.ಗೂ ಮಿಕ್ಕಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ವಿ. ಸುನಿಲ್ ಕುಮಾರ್ ಫೆ. 7ರಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಣೂರು ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.
ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಯುವರಾಜ್ ಜೈನ್, ವೇ. ಮೂ. ಶ್ರೀರಾಮ್ ಭಟ್, ಪಂಚಾಯತ್ ಅಧ್ಯಕ್ಷೆ ಸುಜಾತ ಶೆಟ್ಟಿ, ಉಪಾದ್ಯಕ್ಷ ಪ್ರಸಾದ್ ಪೂಜಾರಿ, ಪಿಡಿಒ ಮಧು ಎಂ.ಸಿ., ಕೆಎಂಫ್ ನ ನಿರ್ದೇಶಕ ನರಸಿಂಹ ಕಾಮತ್, ಎಪಿಎಂಸಿ ನಾಮ ನಿರ್ದೇಶಿತ ಸದಸ್ಯ ದೇವಾನಂದ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷ ಕರುಣಾಕರ್ ಎಸ್. ಕೋಟ್ಯಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉದಯ ಎಸ್. ಕೋಟ್ಯಾನ್, ದಿವ್ಯಶ್ರೀ ಗಿರೀಶ್ ಅಮೀನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಕೋಟ್ಯಾನ್, ಸಾಣೂರು ಬಿಜೆಪಿ ಕಾರ್ಯದರ್ಶಿ ಮೋಹನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾಣೂರು : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಚಿವರಿಂದ ಗುದ್ದಲಿಪೂಜೆ











