ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1 2ಎ, 3ಎ ಮತ್ತು 3 ರಲ್ಲಿ ಒಳಪಡುವ (ವಿಶ್ವಕರ್ಮ, ಉಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ / ಹಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳು, ಒಕ್ಕಲಿಗ, ಲಿಂಗಾಯತ, ಮರಾದ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಪ್ರತಿಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕೆಳಕಂಡಂತೆ ಅರ್ಹತೆ ಹೊಂದಿರಬೇಕಾಗಿರುತ್ತದೆ.
ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ವಾರ್ಷಿಕ ವರಮಾನ ರೂ. 40,000/-ಗಳ ಮಿತಿಯಲ್ಲಿರಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.
24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ ರೂ.2.50 ಲಕ್ಷ ನಿಗಧಿಪಡಿಸಿದ್ದು, ಇದರಲ್ಲಿ ರೂ.1.00 ಲಕ್ಷ ಸಹಾಯ ಧನ ಹಾಗೂ ರೂ, 50,000/- ಗಳ ಶೇ. 4 ರ ಬಡ್ಡಿ ದರದ ಸಾಲ ಒಳಗೊಂಡಿರುತ್ತದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ ರೂ. 4,00 ಲಕ್ಷ ನಗದಿಪಡಿಸಿದ್ದು, ಇದರಲ್ಲಿ ರೂ. 3.50 ಲಕ್ಷ ಸಹಾಯಧನ ಹಾಗೂ ರೂ. 50,000/- ಗಳ ಶೇ.4 ರ ಬಡ್ಡಿ ದರದ ಸಾಲ ಒಳಗೊಂಡಿದ್ದು, ನಿಗಧಿತ ಘಟಕ ವೆಚ್ಚದಿಂದ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು, ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗಧಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ.
ಗಂಗಾ ಕಲ್ಯಾಣ ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ನಿಗಮದ ವೆಬ್‌ಸೈಟ್ http://www.dbcdc.karnatka.gov.in ಇಲ್ಲಿ ಸಂಪರ್ಕಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ 080 22374832 ಅಥವಾ ಆಯಾ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅದರಂತೆ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಯಾ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರಿಗೆ ಸಲ್ಲಿಸಲು ಕಡೆಯ ದಿನಾಂಕ: 07.03.2022.





























































































































































































































error: Content is protected !!
Scroll to Top