Saturday, May 21, 2022
spot_img
HomeUncategorizedಮುಂದುವರಿದ ಸಮವಸ್ತ್ರ ಸಮರ :ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ

ಮುಂದುವರಿದ ಸಮವಸ್ತ್ರ ಸಮರ :ಉಡುಪಿ ಎಂಜಿಎಂ ಕಾಲೇಜಿನಲ್ಲಿ ಉದ್ವಿಗ್ನ ವಾತಾವರಣ

ಉಡುಪಿ : ಉಡುಪಿಯಲ್ಲಿ ಪ್ರಾರಂಭವಾಗಿರುವ ಹಿಜಾಬ್‌ ಇದೀಗ ಹೊಸ ಆಯಾಮದತ್ತ ಹೊರಳಿದೆ. ರಾಜ್ಯದ ವಿವಿಧ ಕಾಲೇಜುಗಳಲ್ಲಿ ಪ್ರತಿಭಟನೆಯ ಜೊತೆಗೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಫೆ. 8ರಂದು ಉಡುಪಿ ನಗರದ ಎಂಜಿಎಂ ಕಾಲೇಜಿಗೆ ಹಲವು ವಿದ್ಯಾರ್ಥಿಗಳು ಹಿಜಾಬ್‌ ಹಾಗೂ ಕೇಸರಿ ಶಾಲು, ಪೇಟದೊಂದಿಗೆ ಆಗಮಿಸಿದ್ದು, ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವೇಳೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆ ನೀಡಿರುತ್ತಾರೆ. ಬಳಿಕ ಎಂಜಿಎಂ ಕಾಲೇಜಿಗೆ ರಜೆ ಘೋಷಲಾಗಿದೆ. ಆದರೂ ವಿದ್ಯಾರ್ಥಿಗಳು ಮನೆಗೆ ತೆರಳದೇ ಪ್ರತಿಭಟನೆಯಲ್ಲಿ ನಿರತರಾಗಿರುವುದು ಕಂಡುಬಂದಿದೆ. ಈ ವೇಳೆ ಪೊಲೀಸರು, ಉಪನ್ಯಾಸಕರು ಮನವೊಲಿಸುವ ಪ್ರಯತ್ನ ನಡೆಸಿದ್ದರೂ ಫಲ ನೀಡಲಿಲ್ಲ. ಶಿವಮೊಗ್ಗ ಸರಕಾರಿ ಪಿಯು ಕಾಲೇಜಿನಲ್ಲಿ ಕಲ್ಲುತೂರಾಟ, ಮಂಡ್ಯ ಪಿಇಎಸ್‌ ಕಾಲೇಜಿನಲ್ಲಿ ಪ್ರತಿಭಟನೆಯೂ ನಡೆದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!