ಕಾರ್ಕಳ : ಕಣಂಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 4 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಫೆ. 7ರಂದು ಸಚಿವ ವಿ. ಸುನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.
ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ನೀರೆ, ಉಪಾಧ್ಯಕ್ಷ ಸತೀಶ್ ದೇವಾಡಿಗ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ರವೀಂದ್ರ ನಾಯಕ್, ಭೂ ನ್ಯಾಯ ಮಂಡಳಿ ಸದಸ್ಯ ವಿಕ್ರಮ್ ಹೆಗ್ಡೆ, ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು, ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಮಾಜಿ ಸದಸ್ಯೆ ವಿದ್ಯಾ ಸಾಲ್ಯಾನ್, ಪೆಲತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ್ ನಾಯ್ಕ್, ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧೀರ ಹೆಗ್ಡೆ, ಕಣಂಜಾರು ಚರ್ಚ್ ನ ಧರ್ಮಗುರು ರೆ. ಫಾ. ವಿಶಾಲ್ ಲೋಬೊ ಧ.ಸ್ವ.ಸಹಾಯ ಸಂಘದ ಮೇಲ್ವಿಚಾರಕಿ ಸೌಮ್ಯ ಶೆಟ್ಟಿ, ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
