ನವದೆಹಲಿ : ಫೆ.9ರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 71,365 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 1,217 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತತ ಮೂರನೇ ದಿನವೂ ದೇಶದಲ್ಲಿ ಹೊಸ ಸೋಂಕಿನ ಪ್ರಮಾಣ ಲಕ್ಷಕ್ಕಿಂತ ಕೆಳಗೆ ದಾಖಲಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,92,828ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ , 1,72,211 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,10,12,869ಕ್ಕೆ ತಲುಪಿದೆ. ಭಾರತದಲ್ಲಿ ಜ. 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,87,06,705 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Recent Comments
ಕಗ್ಗದ ಸಂದೇಶ
on