Thursday, May 19, 2022
spot_img
Homeರಾಜ್ಯಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

ಬೆಂಗಳೂರು: ಹಿಜಾಬ್ ಪ್ರಕರಣದ ಅರ್ಜಿ ಕರ್ನಾಟಕ ಹೈಕೋರ್ಟ್‌ನ ವಿಸ್ತ್ರತ ಪೀಠಕ್ಕೆ ವರ್ಗಾವಣೆಯಾಗಿದೆ. ಉಡುಪಿ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ಪೀಠದಲ್ಲಿ ನಡೆಯುತ್ತಿತ್ತು.

ಎರಡನೇ ದಿನ ವಿಚಾರಣೆ ಆರಂಭದಲ್ಲೇ ಇದು ಬಹಳ ದೊಡ್ಡ ವಿಚಾರ, ಮೂರು ನ್ಯಾಯಾಲಯದ ಆದೇಶ ನೋಡಿದ್ದೇವೆ. ಕೆಲವೊಂದು ಪಿಐಎಲ್ ಗಳು ದಾಖಲು ಆಗುತ್ತಿವೆ. ಆ ಅರ್ಜಿಗಳು ಕೂಡ ವಿಭಾಗೀಯ ಪೀಠಕ್ಕೆ ವಿಚಾರಣೆಗೆ ಬರುತ್ತಿವೆ ಎಂದು ನ್ಯಾ. ಕೃಷ್ಣ ದೀಕ್ಷಿತ್ ಹೇಳಿದರು.

ಕೊನೆಗೆ ಈ ಪ್ರಕರಣದ ವಿಚಾರಣೆ ದೀರ್ಘವಾಗಿರುವ ಕಾರಣ ಯಾವುದೇ ಮಧ್ಯಂತರ ಆದೇಶ ನೀಡುವುದಿಲ್ಲ, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!