Tuesday, May 17, 2022
spot_img
Homeದೇಶಬೆಟ್ಟದ ಬಂಡೆ ನಡುವೆ 2 ದಿನ ಸಿಲುಕಿಕೊಂಡ ಕೇರಳ ಯುವಕನ ರಕ್ಷಿಸಿದ ಭಾರತೀಯ ಸೇನೆ

ಬೆಟ್ಟದ ಬಂಡೆ ನಡುವೆ 2 ದಿನ ಸಿಲುಕಿಕೊಂಡ ಕೇರಳ ಯುವಕನ ರಕ್ಷಿಸಿದ ಭಾರತೀಯ ಸೇನೆ

ಪಾಲಕ್ಕಾಡ್: ಟ್ರೆಕ್ಕಿಂಗ್ ಹೋಗಿ ಮಲಂಪುಳ ಬೆಟ್ಟದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕನೋರ್ವನನ್ನು ಭಾರತೀಯ ಸೇನೆ ಸಾಹಸದ ಕಾರ್ಯಾಚರಣೆ ಮಾಡಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಕೇರಳದ ಮಲಂಪುಳ ಪರ್ವತಗಳ ಕಡಿದಾದ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಮಲಂಪುಳದ 23 ವರ್ಷದ ಬಾಬು ಎಂಬ ಯುವಕ, ಸೋಮವಾರ (ಫೆ.8) ಮೂವರು ಸ್ನೇಹಿತರ ಜೊತೆಗೆ ಚಾರಣಕ್ಕೆ ತೆರಳಿದ್ದನು. ಈ ವೇಳೆ ಮಾರ್ಗ ಮಧ್ಯೆ ಕಾಲು ಜಾರಿ ಕಡಿದಾದ ಬೆಟ್ಟದ ನಡುವೆ ಸಿಲುಕಿದ್ದನು. ಸುಮಾರು 1,000 ಮೀಟರ್ ಎತ್ತರದ ಬೆಟ್ಟ ಇದಾಗಿದ್ದು, ಕಳೆದೆರಡು ದಿನಗಳಿಂದ ನೀರು, ಆಹಾರ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದನು.

ಈ ವಿಚಾರ ತಿಳಿದ ಸ್ಥಳೀಯ ಆಡಳಿತದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುವ ಪ್ರಯತ್ನ ಪ್ರತಿಕೂಲ ಹವಾಮಾನದಿಂದಾಗಿ ವಿಫಲಗೊಂಡಿತ್ತು. ಅಲ್ಲದೆ ಡ್ರೋನ್ ಮೂಲಕ ಯುವಕನಿಗೆ ಆಹಾರ ತಲುಪಿಸುವ ಪ್ರಯತ್ನ ಕೂಡ ವಿಫಲಗೊಂಡಿತ್ತು. ಅಂತಿಮವಾಗಿ ಮಂಗಳವಾರ ರಾತ್ರಿ ಕೇರಳ ಸರ್ಕಾರದ ಮನವಿ ಮೇರೆಗೆ ಭಾರತೀಯ ಸೇನೆಯು ಯಶಸ್ವಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.

ಮಂಗಳವಾರ ರಾತ್ರಿ ಭಾರತೀಯ ಸೇನೆಯ ಎರಡು ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಿತ್ತು. ಮದ್ರಾಸ್ ರೆಜಿಮೆಂಟ್‌ನ 12 ಮಂದಿಯ ತಂಡದಲ್ಲಿ ಪರ್ವತಾರೋಹಿಗಳು ಸೇರಿದಂತೆ ನುರಿತ ಸಿಬ್ಬಂದಿಗಳು ಒಳಗೊಂಡಿದ್ದರು. ಹಾಗೆಯೇ ಬೆಂಗಳೂರಿನ ಪ್ಯಾರಾಚೂಟ್ ರೆಜಿಮೆಂಟ್ ಸೆಂಟರ್‌ನಿಂದ ತೆರಳಿರುವ 22 ಸಿಬ್ಬಂದಿಯ ಎರಡನೇ ತಂಡವು ವಿಮಾನ ಮಾರ್ಗವಾಗಿ ಸೂಲೂರು ಮೂಲಕ ಘಟನಾ ಸ್ಥಳಕ್ಕೆ ತಲುಪಿತ್ತು. ಯುವಕನನ್ನು ರಕ್ಷಿಸಿದ ಬಳಿಕ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!