Saturday, May 21, 2022
spot_img
Homeಸುದ್ದಿಹಿಜಾಬ್‌ ವಿವಾದದಿಂದ ಶಿಕ್ಷಣ ಸ್ಥಗಿತಗೊಳ್ಳುವುದು ಸರಿಯಲ್ಲ: ಮುಖ್ಯ ನ್ಯಾಯಮೂರ್ತಿ

ಹಿಜಾಬ್‌ ವಿವಾದದಿಂದ ಶಿಕ್ಷಣ ಸ್ಥಗಿತಗೊಳ್ಳುವುದು ಸರಿಯಲ್ಲ: ಮುಖ್ಯ ನ್ಯಾಯಮೂರ್ತಿ

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಫೆ.10 ರ ಮಧ್ಯಾಹ್ನ ಆರಂಭವಾಗಿದ್ದು, ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್​ ದೀಕ್ಷಿತ್​ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.
ಫೆ.8, 9 ರಂದು ಎರಡು ದಿನಗಳ ಕಾಲ ಕೃಷ್ಣ ಎಸ್​.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಾಬ್​ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕ ಪ್ರಕರಣ ಧರ್ಮ ಸೂಕ್ಷ್ಮ ವಿಚಾರವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಇಂದು ಮೂವರು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಜಾಬ್​ ಕುರಿತ ಅರ್ಜಿಗಳ ವಿಚಾರಣೆ ನಡೆದಿದೆ.
ವಿಚಾರಣೆ ವೇಳೆ ಹಿಜಾಬ್​ ವಿವಾದದ ಕಾರಣಕ್ಕಾಗಿ ಶಾಲೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಬೇಸರ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿಯವರು, ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನು ಸರ್ಕಾರದ ಪರ ವಕೀಲರು ಒಪ್ಪಿಕೊಂಡಿದ್ದು, ಅಂತಿಮ ತೀರ್ಪು ಬರುವವರೆಗೂ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸದೆ ಕೇವಲ ಸಮವಸ್ತ್ರವನ್ನಷ್ಟೇ ಧರಿಸಬೇಕು ಎಂದು ಆದೇಶಿಸಿ ಹಿಜಾಬ್‌ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!