ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಫೆ. 9ರಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ಕೆಪಿಸಿಸಿ ಅಧ್ಯಕ್ಷರು ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಕಾರ್ಯಕ್ಕೆ ಪ್ರಯತ್ನಿಸಿದ್ದರು ಎಂದು ವಾಗ್ದಾಳಿ ನಡೆಸಿದರು.
ಹಿಜಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶ ನಿರೀಕ್ಷೆ ಮಾಡುತ್ತಿದ್ದೇವೆ. ಎಲ್ಲರೂ ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಿಬೇಕು ಎಂದ ಅವರು, ಕಾಂಗ್ರೆಸ್ ದ್ವೇಷವನ್ನು ಹಚ್ಚುವ ಕೆಲಸ ಮಾಡುತ್ತಿದ್ದು, ವಿಭಜನೆಗೆ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ – ಸುನಿಲ್ ಕುಮಾರ್ ವಾಗ್ದಾಳಿ
Recent Comments
ಕಗ್ಗದ ಸಂದೇಶ
on