Wednesday, July 6, 2022
spot_img
Homeರಾಜ್ಯಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಕಾರ

ಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​ ನಕಾರ

ನವದೆಹಲಿ: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. 

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಜೋರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಹಿರಿಯ ನಾಯಕ ಕಪಿಲ್ ಸಿಬಲ್, ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಸುಪ್ರೀಂ ಕೋರ್ಟ್​ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿದೆ.

ಸದ್ಯ ಪ್ರಕರಣವನ್ನ ಕರ್ನಾಟಕ ಹೈಕೋರ್ಟ್​​ ಪೀಠ ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್​ನ ವಿಸ್ತೃತ ಪೀಠ ವಿಚಾರಣೆ ನಡೆಸಿ ಆದೇಶ ನೀಡಲಿ. ಆದೇಶದ ಬಳಿಕವೂ ಅಗತ್ಯ ಬಿದ್ದರೆ, ಮುಂದೆ ನೋಡೋಣ. ಸದ್ಯ ಸುಪ್ರೀಂಕೋರ್ಟ್​ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ ಎಂದು ವರದಿಗಳು ತಿಳಿಸಿವೆ.​​---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!