ಬೆಂಗಳೂರು: ಹಿಜಾಬ್ ವಿವಾದ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ಮೌಖಿಕ ಮಧ್ಯಂತರ ಆದೇಶ ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 9ನೇ ತರಗತಿ ನಂತರ ಶಾಲೆ-ಕಾಲೇಜುಗಳನ್ನು ಪುನಾರಂಭ ಮಾಡಬೇಕೆಂದು ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶ ನೀಡಿತ್ತು. ಅದರಂತೆ ಸೋಮವಾರದಿಂದ ಮೊದಲನೇ ಹಂತವಾಗಿ ಪ್ರೌಢ ಶಾಲೆಗಳು ಪುನರಾರಂಭಗೊಳ್ಳಲಿದೆ.
ಕರ್ನಾಟಕ ಹೈಕೋರ್ಟ್ ಫೆ. 10 ರಂದು ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾದ, ಧಾರ್ಮಿಕ ಸ್ವಾತಂತ್ರ್ಯವನ್ನು ಪಾಲಿಸುವ ಹಕ್ಕನ್ನು ವಿರೋಧಿಸುವ ತೀರ್ಪನ್ನು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನೀಡಿದೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಹಿರಿಯ ನ್ಯಾಯಾಧೀಶ ಕಪಿಲ್ ಸಿಬಲ್ ಅವರು ಎರಡು ದಿನಗಳ ಹಿಂದೆ ಕರ್ನಾಟಕದಲ್ಲಿ ಆರಂಭಗೊಂಡ ಹಿಜಾಬ್ ವಿವಾದ ಸಂಘರ್ಷಕ್ಕೆ ತಿರುಗಿ ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ನಂತರ ಮಧ್ಯೆ ಪ್ರವೇಶ ಮಾಡಿ ತುರ್ತು ವಿಚಾರಣೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು. ಆದರೆ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ವಿಚಾರಣೆಯಲ್ಲಿ ಮಧ್ಯ ಪ್ರವೇಶ ಮಾಡಲು ನಿರಾಕರಿಸಿತ್ತು.
ಸುಪ್ರೀಂ ಕೋರ್ಟ್ ನಲ್ಲಿ ಇಂದು ಬೆಳಗ್ಗೆ ವರ್ಚುವಲ್ ಮೂಲಕ ಹಿಜಾಬ್ ವಿವಾದ ಸಂಘರ್ಷ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋದ ಅರ್ಜಿದಾರರು
Recent Comments
ಕಗ್ಗದ ಸಂದೇಶ
on