ಕಾರ್ಕಳ : ತೆಳ್ಳಾರು ಸೇತುವೆಯಡಿ ಫೆ. 11ರಂದು ದನದ ತಲೆ ಭಾಗ ಹಾಗೂ ಚರ್ಮ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಕೃತ್ಯವೆಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಕಾರ್ಕಳ ನಗರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಹಾಗೂ ಅವರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
