ಬೆಂಗಳೂರು: ಡಿಗ್ರಿ, ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳಿಗೆ ಫೆಬ್ರವರಿ 16ರವರೆಗೆ ರಜೆ ನೀಡಿ ಪ್ರಕಟಣೆ ಹೊರಡಿಸಿದ್ದ ಉನ್ನತ ಶಿಕ್ಷಣ ಇಲಾಖೆ ಇದೀಗ ಪಿಯುಸಿ ಕಾಲೇಜುಗಳಿಗೂ ಫೆಬ್ರವರಿ 15ರವರೆಗೆ ರಜೆ ಘೋಷಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲು ಆದೇಶ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆ ವ್ಯಾಪ್ತಿಯ ಕಾಲೇಜುಗಳಿಗೆ ಘೋಷಣೆ ಮಾಡಲಾಗಿದ್ದ ರಜೆಯನ್ನು ವಿಸ್ತರಣೆ ಮಾಡಲಾಗಿದ್ದು, ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ಹೈಕೋರ್ಟ್ ಮಧ್ಯಂತರ ಆದೇಶದ ಹೊರತಾಗಿಯೂ ಶಿಕ್ಷಣ ಇಲಾಖೆಗೆ ಹಿಜಾಬ್ ವಿವಾದ ಮತ್ತೆ ಭುಗಿಲೇಳುವ ಸಾಧ್ಯತೆಯಿರುವ ಭೀತಿಯಿಂದ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಕಾಲೇಜುಗಳಿಗೆ ಫೆ.16ರವರೆಗೆ ರಜೆ ಘೋಷಣೆ ಮಾಡಲಾಗಿದೆ.
ಹಿಜಾಬ್ ವಿವಾದ: ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಣೆ
Recent Comments
ಕಗ್ಗದ ಸಂದೇಶ
on