ಬೆಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಸುದ್ದಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ್ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಬಗ್ಗೆ ಫೆ.11 ರಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ನಿರ್ಬಂಧಿಸಲಾಗುವುದು ಎಂದು ಕೆಲವರು ಗಾಳಿಸುದ್ದಿ ಹಬ್ಬಿಸುತ್ತಿದ್ದು, ಬೋಧನಾ ವ್ಯವಸ್ಥೆ ಆನ್ ಲೈನ್ ಮೂಲಕವೇ ನಡೆಯುತ್ತಿರುವುದರಿಂದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಮುಂತಾದ ಆಧುನಿಕ ತಾಂತ್ರಿಕ ಸಾಧನಗಳು ವಿದ್ಯಾರ್ಥಿಗಳ ಕಲಿಕೆಯ ಅವಿಭಾಜ್ಯ ಅಂಗವೇ ಆಗಿಹೋಗಿವೆ. ಹೀಗಿರುವಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ’ ಎಂದು ಅವರು ಪ್ರಶ್ನಿಸಿದರು.
ಇಂತಹ ಗಾಳಿಮಾತುಗಳನ್ನು ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ನಂಬಬಾರದು. ಆಧುನಿಕ ಸಾಧನಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮತ್ತು ಶಿಕ್ಷಣ ಪೂರೈಸುವುದು ಸರಕಾರದ ಆದ್ಯತೆಯಾಗಿದೆ. ಮೊಬೈಲ್ ಬಳಕೆ ಎಂದಿನಂತೆ ಮುಂದುವರಿಯಲಿದೆ ಎಂದು ಸಚಿವರು ಹೇಳಿದರು.
ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಸುಳ್ಳು ಸುದ್ದಿ: ಸಚಿವ ಅಶ್ವತ್ಥನಾರಾಯಣ್
Recent Comments
ಕಗ್ಗದ ಸಂದೇಶ
on