ಹಿಜಾಬ್ ವಿವಾದ : ಉಡುಪಿ ಜಿಲ್ಲೆಯ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ‌

ಉಡುಪಿ : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಎಲ್ಲ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಫೆ. 14 ರಿಂದ 19 ರ ಸಂಜೆ 6 ಗಂಟೆವರೆಗೆ ಸೆಕ್ಷನ್ ಜಾರಿಯಲ್ಲಿ‌ರಲಿದೆ.
ಹಿಜಾಬ್ ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ. ಪ್ರತಿಭಟನೆ, ಮೆರವಣಿಗೆ, ಘೋಷಣೆ ಕೂಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

error: Content is protected !!
Scroll to Top