ಕುಕ್ಕುಂದೂರಿನ ಲೀನಾ ಮಥಾಯಿಸ್‌ ನಿಧನ

ಕಾರ್ಕಳ : ಕಾರ್ಕಳ ರಾಮಸಮುದ್ರ ನಿವಾಸಿ ಸೆಬಸ್ಟೀಯನ್‌ ಪೌಲ್‌ ಅವರ ಪತ್ನಿ ಲೀನಾ ಮಥಾಯಿಸ್‌ (52) ಅವರು ಫೆ. 14ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕುವೈತ್‌ ನ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 28 ವರ್ಷಗಳಿಂದ ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕೆಲವು ತಿಂಗಳಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮುಂಜಾನೆ ಕೊನೆಯುಸಿರೆಳೆದರು. ಮೃತರು ಪುತ್ರಿ ಲೀಸಾ, ಪುತ್ರ ಸಿಂಥಲ್‌ ಅವರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಫೆ. 15ರ ಸಂಜೆ 4 ಗಂಟೆಗೆ ಕುಕ್ಕುಂದೂರು ಗ್ರಾಮದ ನಕ್ರೆ ಚರ್ಚ್‌ ನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದ್ದಾರೆ.

error: Content is protected !!
Scroll to Top