ಬೆಂಗಳೂರು: ಬುಧವಾರದಿಂದ ಪಿಯುಸಿ ಹಾಗೂ ಪದವಿ ಕಾಲೇಜುಗಳು ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ರಾತ್ರಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಉನ್ನತ ಶಿಕ್ಷಣ ಶಿಕ್ಷಣ ಡಾ. ಅಶ್ವತ್ಥ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಾಲೇಜು ಪುನಾರಾರಂಭ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪೋಷಕರು ಮತ್ತು ಮಕ್ಕಳು ಆತಂಕಪಡುವ ಅಗತ್ಯವಿಲ್ಲ. ರಾಜ್ಯಾದ್ಯಂತ ಶಾಲಾ ಕಾಲೇಜುಗಳ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದೆ. ಶಾಲಾ- ಕಾಲೇಜುಗಳ ಜೊತೆಗೆ ಪೊಲೀಸ್ ಇಲಾಖೆ ಇರಲಿದೆ. ಹೈಕೋರ್ಟ್ ಮಧ್ಯಂತರ ಆದೇಶವನ್ನು ಯಾರೂ ಕೂಡಾ ಉಲ್ಲಂಘಿಸದೇ, ಸಮವಸ್ತ್ರ ಧರಿಸಿ ಶಾಲಾ ಕಾಲೇಜುಗಳಿಗೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.
ಬುಧವಾರದಿಂದ ರಾಜ್ಯಾದ್ಯಂತ ಪಿಯು, ಡಿಗ್ರಿ ಕಾಲೇಜ್ ಆರಂಭ: ಬಿ. ಸಿ. ನಾಗೇಶ್
