ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಫೆ. 12ರಂದು ಶಿಕ್ಷಕರ – ಪಾಲಕರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ದೃಢ ವಿಶ್ವಾಸದೊಂದಿಗೆ ವಿದ್ಯಾರ್ಥಿಗಳು ಗುರಿ ತಲುಪಬೇಕೆಂದರು.
ಕಾಲೇಜಿನ ಸಂಸ್ಥಾಪಕರಲ್ಲೊಬ್ಬರಾದ ಡಾ. ಗಣನಾಥ ಶೆಟ್ಟಿ, ಅಶ್ವಥ್ ಎಸ್.ಎಲ್. ಅವರು 2020-21 ನೇ ಸಾಲಿನ ಶೈಕ್ಷಣಿಕ ಮಾಹಿತಿ, ವಿದ್ಯಾಸಂಸ್ಥೆಯಲ್ಲಿನ ವ್ಯವಸ್ಥೆ ಕುರಿತು ತಿಳಿಸಿದರು. ಉಪಪ್ರಾಂಶುಪಾಲ ಗಣಪತಿ ಕೆ.ಎಸ್, ಅಮೃತ್ ರೈ, ಹೆಚ್.ಕೆ. ಎಸ್. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ವಿಮಲ್ ರಾಜ್, ಆದರ್ಶ್ ಎಂ.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜ್ಯೋತಿ ರಮೇಶ್, ಸೌಮ್ಯ ಪಾಲಕರ ಪರವಾಗಿ ಅನಿಸಿಕೆ ವ್ಯಕ್ತಪಡಿಸಿದರು. ಉಪನ್ಯಾಸಕ ವಿನಾಯಕ್ ಜೋಗ್ ಸ್ವಾಗತಿಸಿ, ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ
Recent Comments
ಕಗ್ಗದ ಸಂದೇಶ
on