Wednesday, July 6, 2022
spot_img
Homeಸುದ್ದಿಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ, ಇಲ್ಲವೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ : ಆರಗ ಜ್ಞಾನೇಂದ್ರ...

ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಪಾಲಿಸಿ, ಇಲ್ಲವೇ ಶಿಸ್ತು ಕ್ರಮ ಕೈಗೊಳ್ಳುತ್ತೇವೆ : ಆರಗ ಜ್ಞಾನೇಂದ್ರ ಎಚ್ಚರಿಕೆ

ಬೆಂಗಳೂರು: ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಸಿದ್ದಾರೆ.
ವಿಧಾನಸೌಧದಲ್ಲಿ ಫೆ.16 ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಪಾಲನೆ ಮಾಡುವುದು ದೇಶದ ಎಲ್ಲಾ ‌ನಾಗರೀಕರ ಕರ್ತವ್ಯ. ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು, ಹಿಜಾಬ್ ಧರಿಸಿ ಬರುತ್ತೇವೆಂದು ಪಟ್ಟು ಹಿಡಿಯುವಂತಿಲ್ಲ ಪಟ್ಟು ಹಿಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ. ಕೋರ್ಟ್ ಆದೇಶಕ್ಕೆ ಮಾನ್ಯತೆ ಕೊಡದಿದ್ದವರು ಈ ದೇಶದ ಪ್ರಜೆಗಳಲ್ಲ ಎನ್ನುವುದು ಅರ್ಥವಾಗುತ್ತದೆ. ಕಾನೂನಿಗಿಂತ ಇಲ್ಲಿ ಯಾರೂ ದೊಡ್ಡವರಲ್ಲ. ಶಿಕ್ಷಣ ಬೇಕೆಂದರೆ ಶಿಕ್ಷಣ ಸಂಸ್ಥೆಗಳು ಮಾಡಿರುವ ಕಾನೂನನ್ನು ಪಾಲಿಸಿ ಬರಬೇಕು ಎಂದರು.
ಪ್ರತಿಭಟನೆ ಮಾಡುವರು ಶಾಲೆಯ ಒಳಗಡೆ ಬರುವುದಕ್ಕೆ ಅವಕಾಶವಿಲ್ಲ. ಕೋರ್ಟ್ ಆದೇಶ ಪಾಲನೆ ಮಾಡದವರ ವಿರುದ್ಧ ಕ್ರಮ ಆಗಬೇಕು. ಕೆಲವು ಕಾಲೇಜುಗಳಲ್ಲಿ ನಿಯಮ ಉಲ್ಲಂಘನೆ ವಿಚಾರ ಗಮನಕ್ಕೆ ಬಂದಿದೆ. ಯಾರು ಕೂಡ ನಿಯಮ ಉಲ್ಲಂಘನೆ ಮಾಡದಂತೆ ಹಾಗೂ ಕೋರ್ಟ್ ಆದೇಶದಂತೆ ಶಾಲೆಗಳ ನಡೆಯುವಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಮಕ್ಕಳ ಮನಸ್ಸಿಗೆ ನೋವಾಗಬಾರದು. ಮಕ್ಕಳಿಗೆ ಬುದ್ಧಿ ಹೇಳಬಹುದೆಂದು ಇದೂವರೆಗೆ ನಮ್ಮ ಆಡಳಿತ ಮಂಡಳಿ, ಪೊಲೀಸ್ ಇಲಾಖೆ ಸ್ವಲ್ಪ ಮೃದು ಧೋರಣೆ ತೋರಿದ್ದಾರೆ. ಇನ್ನು ಮುಂದೆ ಮೃದು ಧೋರಣೆ ಇಲ್ಲ. ಅದರ ಪರಿಣಾಮವಾಗಿ ಎಲ್ಲಾ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಎಲ್ಲೂ ಗಲಾಟೆ ಆಗಿಲ್ಲ. ಕೆಲವೆಡೆ ಮಾತ್ರ ರಗಳೆ ಆಗಿದೆ. ಬಳಿಕ ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮನವೊಲಿಸಿ ಅವರನ್ನು ಶಾಲೆಗೆ ಕಳುಹಿಸಿದ್ದಾರೆ. ಯಾವುದೇ ಪ್ರತಿರೋಧ ವ್ಯಕ್ತವಾಗಿಲ್ಲ ಎಂದು ತಿಳಿಸಿದರು.
ಶಾಂತಿಯುತ ವಾತಾವರಣ ನಿರ್ಮಿಸಲು ಎಲ್ಲರೂ ಸಹಕರಿಸಬೇಕು. ಈಗಾಗಲೇ ಡಿಸಿ ಮತ್ತು ಎಸ್’ಪಿ ಜೊತೆಗೆ ಮಾತನಾಡಿದ್ದೇನೆ ಎಂದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!