ಕಾರ್ಕಳ : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಫೆ.12 ರಿಂದ 19 ರವರೆಗೆ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸರಕಾರದ ವಿವಿಧ ಕಛೇರಿಗಳಲ್ಲಿ ಬಾಕಿಯಿದ್ದ 7498 ಕಡತಗಳ ಪೈಕಿ ಈವರೆಗೆ 3155 ಕಡತಗಳನ್ನು ವಿಲೇವಾರಿ ಮಾಡಲಾಗಿದೆ. ಕಂದಾಯ ಇಲಾಖೆ ಕಾರ್ಕಳ ಮತ್ತು ಹೆಬ್ರಿ ತಾಲೂಕು ಕಛೇರಿಯಲ್ಲಿ 2032 ಕಡತಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಕಳ ಮತ್ತು ಹೆಬ್ರಿ ತಾಲೂಕು ಪಂಚಾಯತ್ಗಳಲ್ಲಿ 392 ಕಡತಗಳು, ಕಾರ್ಕಳ ಪುರಸಭೆ ಕಛೇರಿಯಲ್ಲಿ 59 ಕಡತಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ 75 ಕಡತಗಳು, ತೋಟಗಾರಿಕಾ ಇಲಾಖೆ ಕಛೇರಿಯಲ್ಲಿ 93 ಕಡತಗಳು, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ 388 ಕಡತಗಳು ಹಾಗೂ ಇತರ ಇಲಾಖೆಗಳ 116 ಕಡತಗಳು ಸೇರಿದಂತೆ ಒಟ್ಟು 3155 ಕಡತಗಳನ್ನು ವಿಲೇವಾರಿ ಮಾಡಲಾಗಿದ್ದು ಬಾಕಿ ಇರುವ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent Comments
ಕಗ್ಗದ ಸಂದೇಶ
on