Tuesday, July 5, 2022
spot_img
Homeರಾಜ್ಯಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ : ಯದುವೀರ್ ಒಡೆಯರ್

ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ : ಯದುವೀರ್ ಒಡೆಯರ್

ಮೈಸೂರು : ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ ಹಾಗೂ ಉತ್ತರವಿದೆ. ಆದ್ದರಿಂದ‌ ಧರ್ಮ ರಕ್ಷಣೆ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ಚಾಮರಾಜನಗರದ ನಂದಿ ಭವನದಲ್ಲಿ ಆಯೋಜಿಸಿರುವ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದರು. ಕಡಿಮೆ ಸಂಖ್ಯೆಯಲ್ಲಿದ್ದ ಬ್ರಿಟಿಷರು ಭಾರತವನ್ನು ಆಳಲು ಸಾಧ್ಯವಾಗಿದ್ದು ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದಾಗಿ. ಜಯ ಚಾಮರಾಜ ಒಡೆಯರ್ ವಿಶ್ವ ಹಿಂದೂ ಪರಿಷತ್‌ನ ಅದ್ಯಕ್ಷರಾಗಿದ್ದರು. ಜೊತೆಗೆ ಬೇಸಿಗೆ ಅರಮನೆಯಲ್ಲಿ ವಿಎಚ್‌ಪಿ ಸಮ್ಮೇಳನವೂ ನಡೆದಿತ್ತು ಎಂದು ನೆನಪಿಸಿಕೊಂಡರು. ಧರ್ಮದ ಜೊತೆ ಪರಿಸರ ರಕ್ಷಣೆಗೂ ನಾವು ಆದ್ಯತೆ ಕೊಡಬೇಕು. ಇದಕ್ಕೆಲ್ಲಾ ಶಿಕ್ಷಣವೇ ಪರಿಹಾರ ಕೊಡಬೇಕು. ಶಿಕ್ಷಣದಿಂದಲೇ ಈ ಬಗ್ಗೆ ಜಾಗೃತಿ ಮಾಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!