Wednesday, July 6, 2022
spot_img
Homeಸುದ್ದಿವಿದ್ಯಾರ್ಥಿಗಳು ಅವಕಾಶ ಸದುಪಯೋಗಪಡಿಸಿ : ಡಾ. ಪಿ.ಎಸ್. ಯಡಪಡಿತ್ತಾಯ

ವಿದ್ಯಾರ್ಥಿಗಳು ಅವಕಾಶ ಸದುಪಯೋಗಪಡಿಸಿ : ಡಾ. ಪಿ.ಎಸ್. ಯಡಪಡಿತ್ತಾಯ

ಕಾರ್ಕಳ : ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮಂಗಳೂರು ವಿವಿ ಕುಲಪತಿ ಡಾ. ಪಿ.ಎಸ್.‌ ಯಡಿಪಡಿತ್ತಾಯ ಅಭಿಪ್ರಾಯಪಟ್ಟರು.

ಅವರು ಇತ್ತೀಚೆಗೆ ಶಿರ್ಡಿ ಸಾಯಿಬಾಬ ಮಂದಿರದ 9 ನೇ ವರ್ಷದ ವರ್ಧಂತಿ ಮಹೋತ್ಸವ ಪ್ರಯುಕ್ತ ಶಿರ್ಡಿ ಸಾಯಿ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಸಂಸ್ಥಾಪಕ ಚಂದ್ರಹಾಸ ಸುವರ್ಣ ಅ‍ಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್, ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಕೋಟ್ಯಾನ್, ಸಂಸ್ಥೆಯ ಅಧ್ಯಕ್ಷ ಅಭಿಷೇಕ್ ಸುವರ್ಣ, ಆಡಳಿತಾಧಿಕಾರಿ ಆಶೀಷ್ ಶೆಟ್ಟಿ, ಪ್ರಾಂಶುಪಾಲ ಸೌಮ್ಯಶ್ರೀ ಉಪಸ್ಥಿತರಿದ್ದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!