ಕಾರ್ಕಳ : ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಸಹಭಾಗಿತ್ವದಲ್ಲಿ ಫೆ. 17 ರಂದು ನಡೆದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ ಯಲ್ಲಿ ಕಾರ್ಕಳ ಜ್ಞಾನಸುಧಾ ಪ.ಪೂ. ಕಾಲೇಜಿನ ದ್ವಿತೀಯ ಪಿಯುಸಿ ಪಿ.ಸಿ.ಎಂ.ಬಿ. ವಿಭಾಗದ ಸುಮನ್ ಎಂ. ಪ್ರಥಮ ಸ್ಥಾನ ಹಾಗೂ ಪ್ರಥಮ ಪಿಯುಸಿ ಪಿ.ಸಿ.ಎಂ.ಸಿ. ವಿಭಾಗದ ಧನ್ವಿತ್ ನಾಯಕ್ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
