ಕಾರ್ಕಳ : ಕರ್ನಾಟಕ ರಾಜ್ಯ ಸಹಕಾರ ಭಾರತೀಯ ರಾಜ್ಯ ಹಾಲು ಪ್ರಕೋಷ್ಠದ ನೂತನ ಸಂಚಾಲಕರಾಗಿ ಸಾಣೂರಿನ ನರಸಿಂಹ ಕಾಮತ್ ಆಯ್ಕೆಯಾಗಿದ್ದಾರೆ. ಬಾಗಲಕೋಟೆಯ ಶ್ರೀ ಕಣವಿ ವೀರಭದ್ರೇಶ್ವರ ಸಾಂಸ್ಕೃತಿಕ ಭವನದಲ್ಲಿ ಜರುಗಿದ ಕರ್ನಾಟಕ ರಾಜ್ಯ ಸಹಕಾರ ಭಾರತೀಯ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ನರಸಿಂಹ ಕಾಮತ್ ಅವರನ್ನು ಆಯ್ಕೆ ಮಾಡಲಾಯಿತು.
ಸಹಕಾರ ಭಾರತಿಯ ರಾಜ್ಯಾಧ್ಯಕ್ಷ ರಾಜಶೇಖರ ಶೀಲವಂತ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥ ಪ್ರಮುಖ್ ಮಂಗೇಶ್ ಜಿ ಬೇಂಡೆ, ಕರ್ನಾಟಕ ರಾಜ್ಯ ಸಹಕಾರ ಭಾರತೀಯ ಪ್ರಧಾನ ಕಾರ್ಯದರ್ಶಿ ಮೋಹನದಾಸ ನಾಯಕ ಉಪಸ್ಥಿತರಿದ್ದರು.