ಮೇಕೆದಾಟು ಪಾದಯಾತ್ರೆ ಪುನರಾರಂಭ: ಡಿ. ಕೆ. ಶಿವಕುಮಾರ್

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಫೆ.27 ಕ್ಕೆ ಮೇಕೆದಾಟು ಪಾದಯಾತ್ರೆ ಪುನರಾರಂಭಗೊಳ್ಳುತ್ತಿದ್ದು ರಾಮನಗರದಿಂದ ಬೆಂಗಳೂರಿನವರೆಗೂ ಉಳಿದ 6 ದಿನಗಳ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದೆ.
ಜ.9ರಂದು ಮೇಕೆದಾಟು ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆಯನ್ನು ಪ್ರಾರಂಭಿಸಿ, ರಾಮನಗರವಾಗಿ ಬೆಂಗಳೂರಿಗೆ ತಲುಪಬೇಕಿತ್ತು. ಆದರೆ ಆ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆ ಕಂಡದ್ದರಿಂದ ಹೈಕೋರ್ಟ್‌ ಆದೇಶದ ಮೇರೆಗೆ ಪಾದಯಾತ್ರೆಯನ್ನು ನಿಲ್ಲಿಸಿತ್ತು.
ಇದೀಗ ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್‌ ಪಾದಯಾತ್ರೆಯನ್ನು ಮುಂದುವರಿಸಲು ತೀರ್ಮಾನಿಸಿದೆ.

error: Content is protected !!
Scroll to Top