ಬೆಂಗಳೂರು: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಅಪರಾಧಿಗಳು ಯಾವುದೇ ಪಕ್ಷ ಅಥವಾ ಸಂಘಟನೆಗೆ ಸೇರಿದ್ದರೂ ಅವರನ್ನು ಬಂಧಿಸಿ ಗಲ್ಲುಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಫೆ.೨೧ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಡೆದ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿ ಕೊಲೆ ನಡೆದಿರುವುದರಿಂದ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನಾವು ಅಹಿಂಸೆಯನ್ನು ನಂಬುವುದರಿಂದ ಈ ಹತ್ಯೆಯನ್ನು ತೀರ್ವವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರು ಯಾವುದೇ ಪಕ್ಷ ಅಥವಾ ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಘಟನೆಗೆ ಈಶ್ವರಪ್ಪ ಮತ್ತು ಆರಗ ಜ್ಞಾನೇಂದ್ರ ಜವಾಬ್ದಾರರು ಎಂದರು.
ಅಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ತಕ್ಷಣ ಬಂಧಿಸಿ: ಸಿದ್ದರಾಮಯ್ಯ
Recent Comments
ಕಗ್ಗದ ಸಂದೇಶ
on