Wednesday, July 6, 2022
spot_img
Homeಸುದ್ದಿಭಜರಂಗದಳ ಕಾರ್ಯಕರ್ತನ ಹತ್ಯೆ ಇಬ್ಬರು ಆರೋಪಿಗಳು ವಶಕ್ಕೆ

ಭಜರಂಗದಳ ಕಾರ್ಯಕರ್ತನ ಹತ್ಯೆ ಇಬ್ಬರು ಆರೋಪಿಗಳು ವಶಕ್ಕೆ

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ(24) ಕೊಲೆಯಾದ ಘಟನೆ ಫೆ.20 ರ ರಾತ್ರಿ ಶಿವಮೊಗ್ಗದ ಸೀಗೆ ಹಟ್ಟಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎ.ಡಿ.ಜಿ.ಪಿ. ಎಸ್. ಮುರುಗನ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಪೊಲೀಸರು ಬೆಳಗ್ಗೆಯಿಂದ ಕ್ರಮ ಕೈಗೊಳ್ಳುತ್ತಿದ್ದೇವೆ ಹಾಗೂ ಪರಿಶೀಲನೆ ಮಾಡುತ್ತಿದ್ದೇವೆ. ಶಾಂತಿ ಕಾಪಾಡಲು ಜನರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಯುವಕನ ಹತ್ಯೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಸೆಕ್ಷನ್‌ 144 ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!