ಕಾರ್ಕಳ : ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಾಡಲಿದೆ ಎಂದು ಹೇಳಿಕೆ ನೀಡಿದ ಸಚಿವ ಈಶ್ವರಪ್ಪ ಅವರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಿದೆ.
ಫೆ. 21ರಂದು ಕಾರ್ಕಳ ತಾಲೂಕು ಕಚೇರಿಯಲ್ಲಿ ಉಪ ತಹಶೀಲ್ದಾರ್ ಮಂಜುನಾಥ್ ನಾಯಕ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಡಿಸಿಸಿ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಜಿಲ್ಲಾ ವಕ್ತಾರ ಬಿಪಿನ್ಚಂದ್ರ ಪಾಲ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರವಿಶಂಕರ್ ಶೇರಿಗಾರ್, ಇಂಟಕ್ ಅಧ್ಯಕ್ಷ ಸುಧಾಕರ್ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಧುರಾಜ್ ಶೆಟ್ಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಸ್ಲಾಂ, ಸೇವಾದಳದ ಅಧ್ಯಕ್ಷ ಶೇಖ್ ಅಬ್ದುಲ್ಲಾ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ಜಿಲ್ಲಾ ಎಸ್ಟಿ ಸಮಿತಿ ಉಪಾಧ್ಯಕ್ಷ ಸೋಮನಾಥ್ ನಾಯಕ್, ಪುರಸಭಾ ಸದಸ್ಯ ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಪ್ರೀತ್ ಶೆಟ್ಟಿ, ಪುರಸಭಾ ಮಾಜಿ ಸದಸ್ಯರಾದ ವಿವೇಕಾನಂದ ಶೆಣೈ, ನವೀನ್ ದೇವಾಡಿಗ, ಸುಭಿತ್ ಎನ್.ಆರ್., ಜಿಲ್ಲಾ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ದಯಾನಂದ್ ಮಡೇಕರ್, ಪ್ರಕಾಶ್ ಆಚಾರ್ಯ, ಸತೀಶ್ ಕಾರ್ಕಳ, ಸುನಿಲ್ ಕುಮಾರ್ ಭಂಡಾರಿ, ಶೋಭಾ ಅಂಬಾಪ್ರಸಾದ್ ಉಪಸ್ಥಿತರಿದ್ದರು.
ಕಾರ್ಕಳ : ಸಚಿವ ಈಶ್ವರಪ್ಪರನ್ನು ಮಂತ್ರಿಸ್ಥಾನದಿಂದ ವಜಾಗೊಳಿಸುವಂತೆ ಬ್ಲಾಕ್ ಕಾಂಗ್ರೆಸ್ ಮನವಿ
Recent Comments
ಕಗ್ಗದ ಸಂದೇಶ
on