Wednesday, July 6, 2022
spot_img
Homeಸುದ್ದಿಮಾಳ : ಬಾಲವನ ಉದ್ಘಾಟನೆ - ಅಭಿನಂದನಾ ಕಾರ್ಯಕ್ರಮ

ಮಾಳ : ಬಾಲವನ ಉದ್ಘಾಟನೆ – ಅಭಿನಂದನಾ ಕಾರ್ಯಕ್ರಮ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗೈ ಮಾಳ ಶಾಲೆಯಲ್ಲಿ ಫೆ. 20ರಂದು ಬಾಲವನ ಉದ್ಘಾಟನೆ ಹಾಗೂ ಅಭಿನಂದನಾ ಕಾರ್ಯಕ್ರಮ ಜರುಗಿತು. ಉದ್ಯಮಿ ವಿಶ್ವನಾಥ ಪ್ರಭು ಕಾರ್ಯಕ್ರಮ ಉದ್ಘಾಟಿಸಿದರು. ಮಾಳ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಲೆಗೆ ಕೊಡುಗೆ ನೀಡಿದವರನ್ನು ಸನ್ಮಾನಿಸಲಾಯಿತು.
ಉದ್ಯಮಿ ರವೀಂದ್ರ ಶೆಟ್ಟಿ, ಕಾರ್ಕಳ ಪಿ.ಎಲ್. ಡಿ. ಬ್ಯಾಂಕ್‌ ಅಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ಶ್ರೀ ಕ್ಷೇ. ಗ್ರಾ. ಯೋ. ಮಾಳ ಒಕ್ಕೂಟದ ದಿನೇಶ ಪೂಜಾರಿ, ಬಿ ಒಕ್ಕೂಟದ ಪ್ರವೀಣ ಹೆಗ್ಡೆ, ಮಾಳ ಪಂಚಾಯತ್ ಸದಸ್ಯ ಶಶಿಕಲಾ ಪೂಜಾರಿ, ಉಮೇಶ್ ಪೂಜಾರಿ, ಸುಧೀರ್ ಶೆಟ್ಟಿ, ಮಾಳ ವ್ಯ. ಸೇ. ಸ. ಬ್ಯಾಂಕಿನ ಅಧ್ಯಕ್ಷ ಅನಿಲ್ ಎಸ್. ಪೂಜಾರಿ, ಉಡುಪಿ ಜಿಲ್ಲಾ ಶಿಕ್ಷಕ ಸಂಘದ ಕಾರ್ಯದರ್ಶಿ ಸಂಜೀವ ದೇವಾಡಿಗ, ತಾ.ಪಂ. ನಿಕಟ ಪೂರ್ವ ಅಧ್ಯಕ್ಷೆ ಸೌಭಾಗ್ಯ ಮಡಿವಾಳ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ್ ಮೂಲ್ಯ, ಉಡುಪಿ ಜಿಲ್ಲಾ ಪ್ರಾ.ಶಾ.ಶಿ. ಸಂಘದ ಕಾರ್ಯದರ್ಶಿ ಸಂಜೀವ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ, ಗ್ರಾ. ಪಂ. ಸದಸ್ಯ ಉಮೇಶ್ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕಿ ರೇವತಿ ಸ್ವಾಗತಿಸಿ, ಸಹಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸುಧೀರ್ ಶೆಟ್ಟಿ ವಂದಿಸಿದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!