ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ನ್ಯಾಯಾಂಗ ನಿಂದನೆ ಬರಹ ಪ್ರಕಟಿಸಿ ಜನರನ್ನು ಪ್ರಚೋದಿಸಿದ ಆರೋಪದಡಿ ಕನ್ನಡ ಚಿತ್ರನಟ ಚೇತನ್ ನನ್ನು ಫೆ.22 ರಂದು ಬಂಧಿಸಲಾಗಿದೆ. ಚೇತನ್ ಅವರು ಹೈಕೋರ್ಟ್ ನ್ಯಾಯಮೂರ್ತಿಗಳ ಬಗ್ಗೆ ಪದೇ ಪದೇ ಟ್ವೀಟ್ ಮಾಡಿದ ನಂತರ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ .
ಚೇತನ್ ರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದು, ಬಳಿಕ ತಡರಾತ್ರಿಯೇ ಅವರನ್ನು ಕೋರಮಂಗಲ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಹಿರಿಯ ವಕೀಲರಾದ ಬಾಲನ್ ವಾದ ಮಂಡಿಸಿದರು. ಆ ನಂತರ 8ನೇ ಎಸಿಎಂಎಂ ಕೋರ್ಟ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಹಿಜಾಬ್ ವಿವಾದ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾ.ಕೃಷ್ಣ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದೆ.
ಈ ಕುರಿತು ಚೇತನ್ ಫೆ.16ರಂದು ಟ್ವೀಟ್ ಮಾಡಿ ನ್ಯಾ. ಕೃಷ್ಣ ದೀಕ್ಷಿತ್ ಅವರನ್ನು ನಿಂದಿಸಿದ್ದು, ಹಳೆಯ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಈ ಕಾರಣಕ್ಕೆ ಪೊಲೀಸರು ಚೇತನ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ನ್ಯಾಯಾಧೀಶರ ವಿರುದ್ಧ ಟ್ವೀಟ್ – ನಟ ಚೇತನ್ ಬಂಧನ
Recent Comments
ಕಗ್ಗದ ಸಂದೇಶ
on