ಕಾರ್ಕಳ : ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಫೆ. 22ರಂದು ಸ್ಕೌಟ್ಸ್ ಸಂಸ್ಥಾಪಕರ ದಿನ ಆಚರಿಸಲಾಯಿತು. ಪ್ರಾಥಮಿಕ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಉಮಾ ಫ್ರಾನ್ಸಿಸ್ ಮಾತನಾಡಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಹಬಾಳ್ವೆ, ಸಹಿಷ್ಣುತೆ ಮತ್ತು ಶಿಸ್ತು ಕಲಿಸುವುದು. ವಿದ್ಯಾರ್ಥಿಗಳು ಇಂತಹ ಕಾರ್ಯಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕೆಂದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಮೇರಿಯನ್ ಡಿ’ಸೋಜಾ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಸ್ಕೌಟ್ಸ್ ನಿರ್ದೇಶಕ ಪ್ರಕಾಶ್ ನಾಯ್ಕ್, ಕೃಷ್ಣಪ್ರಸಾದ್, ಗೈಡ್ಸ್ ನಿರ್ದೇಶಕಿ ಜಯಲಕ್ಷ್ಮೀ ಉಪಸ್ಥಿತರಿದ್ದರು.
ಕ್ರೈಸ್ಟ್ ಕಿಂಗ್ ಶಾಲೆಯಲ್ಲಿ ಸ್ಕೌಟ್ಸ್ ಸಂಸ್ಥಾಪಕರ ದಿನಾಚರಣೆ
Recent Comments
ಕಗ್ಗದ ಸಂದೇಶ
on