Thursday, May 19, 2022
spot_img
Homeಸ್ಥಳೀಯ ಸುದ್ದಿಮಣಿಪಾಲ : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್

ಮಣಿಪಾಲ : ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್

ಮಣಿಪಾಲ : ಮಣಿಪಾಲದಲ್ಲಿ ಇಂದು ನಡು ರಸ್ತೆಯಲ್ಲೇ ಬಸ್ ಒಂದು ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ಫೆ. 23ರ ಮುಂಜಾನೆ ನಾಲ್ಕೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತಿದ್ದ ಖಾಸಗಿ ಬಸ್ ನಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿತು. ಈ ವೇಳೆ ಬೆಂಗಳೂರಿನಿಂದ ಮಣಿಪಾಲಕ್ಕೆ ಆಗಮಿಸಿದ್ದ ಪ್ರಯಾಣಿಕರನ್ನು ಕೆಳಕ್ಕಿಳಿಸಲಾಯಿತು. ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಇಡೀ ಬಸ್ ಗೆ ಆವರಿಸಿ ಬಸ್ ಬೆಂಕಿಗಾಹುತಿಯಾಯಿತು.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!