ಶ್ರೀನಗರ : ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹುತಾತ್ಮರಾದ ದುರ್ಘಟನೆ ನಡೆದಿದೆ. ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಎಂಬ ಯೋಧ ಹುತಾತ್ಮರಾಗಿದ್ದಾರೆ. ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಎಒಸಿ ರೆಜಿಮೆಂಟ್ನಲ್ಲಿ ಕರ್ತವ್ಯದಲ್ಲಿದ್ದ ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಹುತಾತ್ಮ ಯೋಧ. ಅಲ್ತಾಫ್ ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದವರು. ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ಮಾಡಿ ಪಿಯುಸಿ ಬಳಿಕ ಸೇನೆಗೆ ಸೇರಿದ್ದರು. 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪಿಯುಸಿ ಬಳಿಕ ಆರ್ಮಿ ಸೇರಿದ್ದ ಅಲ್ತಾಫ್ ದೇಶಸೇವೆಯಲ್ಲಿ ನಿರತರಾಗಿದ್ದರು. 19 ವರ್ಷಗಳಿಂದ ದೇಶ ಸೇವೆಯಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ. ಆಲ್ತಾಫ್ ಅಹಮ್ಮದ್ ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಪತ್ನಿ, ಮಗಳು ಹಾಗೂ ಮಗನನ್ನು ಅಗಲಿದ್ದಾರೆ.
Recent Comments
ಕಗ್ಗದ ಸಂದೇಶ
on