ಉಡುಪಿ : ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ಸಂಭವಿಸಿರುವುದರಿಂದ ಉಕ್ರೇನ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ ಉಡುಪಿ ಜಿಲ್ಲೆಯವರ ಮಾಹಿತಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ತಿಳಿಸಿದ್ದಾರೆ. ಸಂಬಂಧಪಟ್ಟವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ : 1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಉಕ್ರೇನ್ ನಲ್ಲಿರುವ ಉಡುಪಿಯವರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ
