Saturday, May 21, 2022
spot_img
Homeರಾಜ್ಯಬೆಂಗಳೂರು : ರಾಜ್ಯದ ರೈತರಿಗೆ ಸಿಹಿ ಸುದ್ದಿ - ಸಮರ್ಪಕ ವಿದ್ಯುತ್‌ ಪೂರೈಕೆಗೆ ಸೂಚನೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಹಿ ಸುದ್ದಿ – ಸಮರ್ಪಕ ವಿದ್ಯುತ್‌ ಪೂರೈಕೆಗೆ ಸೂಚನೆ

ಬೆಂಗಳೂರು : ಕೃಷಿ ಪಂಪಸೆಟ್ ಪೀಡರ್ ಗಳಿಗೆ ಹಗಲು ವೇಳೆ ನಿರಂತರ ಏಳು ಗಂಟೆಗಳ ಕಾಲ ಮೂರು ಫೇಸ್ ಹಾಗೂ ಗೃಹ ಬಳಕೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯ ಗಳಿಗೆ ವಲಯ ಮುಖ್ಯ ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಗೃಹ ಬಳಕೆ, ವಾಣಿಜ್ಯ ಬಳಕೆ, ಕೈಗಾರಿಕೆ ಬಳಕೆ ಹಾಗೂ ಕೃಷಿ ಪಂಪಸೆಟ್ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಇಂಧನ ಸಚಿವ ಸಮಸ್ಯೆಗಳಿಗೆ ವಲಯ ಮುಖ್ಯ ಎಂಜಿನಿಯರ್ ಗಳನ್ನು ಹೊಣೆ ಮಾಡಲಾಗುವುದು ಮತ್ತು ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಎಲ್ಲಾ ಎಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಆಗುವ ತಾಂತ್ರಿಕ ಹಾಗೂ ತಾಂತ್ರಿಕೇತರ ಸಮಸ್ಯೆಯಿಂದ ಆಗುವ ವಿದ್ಯುತ್ ಪೂರೈಕೆ ಸಮಸ್ಯೆ ಬಗ್ಗೆ ಪ್ರತಿ ದಿನ ಬೆಳಗ್ಗೆ 11 ಗಂಟೆಯೊಳಗಾಗಿ ಮಾಹಿತಿ ಸಂಗ್ರಹಿಸಿ ಅದಕ್ಕೆ ಪರಿಹಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ವಿದ್ಯುತ್ ವ್ಯತ್ಯಯದಿಂದ ಆಗುವ ತೊಂದರೆಯನ್ನು ಕರ್ತವ್ಯ ಲೋಪ ಎಂದೇ ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಸಾಮಾನ್ಯ ದಿನಗಳ ವಿದ್ಯುತ್ ಬಳಕೆ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಿದೆ. ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಕೊರತೆ‌ ಇಲ್ಲ. ಆದರೆ ಸರಬರಾಜು ಸಂದರ್ಭದಲ್ಲಿ ವ್ಯತ್ಯಾಸವಾಗುತ್ತದೆ ಈ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ರಾಜ್ಯದ ಅನೇಕ ಭಾಗಗಳಿಂದ ಜನಪ್ರತಿನಿಧಿಗಳು, ರೈತ ಮುಖಂಡರು, ರೈತರು ನೀರಾವರಿ ಪಂಪ್ ಸೆಟ್ ಗಳಿಗೆ ಸರಕಾರದ ನಿಯಮಾವಳಿ ಪ್ರಕಾರ 7 ಗಂಟೆ ಮೂರು ಪೇಸ್ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ದೂರು ನೀಡುತ್ತಿದ್ದಾರೆ. ಇದಕ್ಕೆ ಹೊಣೆ ಯಾರು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು ಸಮಸ್ಯೆ ಪರಿಹಾರಕ್ಕೆ ಉತ್ತರದಾಯಿತ್ವ ನಿಗದಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!