ಶ್ರೀನಗರ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರಾ ಪ್ರದೇಶದಲ್ಲಿ ಫೆ.25ರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಂಶಿಪೋರಾದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಲಾಯಿತು.
ಇದರಂತೆ ಉಗ್ರರ ದಾಳಿಗೆ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಹತ್ಯೆಯಾದ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
Recent Comments
ಕಗ್ಗದ ಸಂದೇಶ
on