Wednesday, July 6, 2022
spot_img
Homeಸುದ್ದಿಫೆ. 28 : ಬೈಲೂರು ಸಹಕಾರಿ ಬ್ಯಾಂಕ್‌ ಸ್ಥಳಾಂತರ ಸಮಾರಂಭ

ಫೆ. 28 : ಬೈಲೂರು ಸಹಕಾರಿ ಬ್ಯಾಂಕ್‌ ಸ್ಥಳಾಂತರ ಸಮಾರಂಭ

ಬೈಲೂರು : ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಬೈಲೂರು ಶಾಖೆಯ ಸ್ಥಳಾಂತರ ಸಮಾರಂಭ ಹಾಗೂ ಬೈಲೂರು ವಿಭಾಗದ ನವೋದಯ ಸ್ವಸಹಾಯ ಸಂಘಗಳ ಸಮಾವೇಶವು ಫೆ. 28 ರ ಜರಗಲಿದೆ. ಕೌಡೂರು ಗ್ರಾಮದ ಬೈಲೂರು ಪೇಟೆಯಲ್ಲಿರುವ ಶ್ರೀ ಬೆನಕಾ ಅಪಾರ್ಟ್‌ಮೆಂಟ್”ನ ಪ್ರಥಮ ಅಂತಸ್ತಿಗೆ ಬ್ಯಾಂಕ್ ಸ್ಥಳಾಂತರಗೊಂಡಿದ್ದು,‌ ಸೋಮವಾರ ಪೂರ್ವಾಹ್ನ 10.30 ಗಂಟೆಗೆ ಸಮಾರಂಭ ನಡೆಯಲಿದೆ.
ಸಚಿವ ವಿ. ಸುನಿಲ್‌ ಕುಮಾರ್‌ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉಪಸ್ಥಿತರಿರುವರು.
ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಸಹಕಾರ ಸಂಘಗಳ ನಿಬಂಧಕ ಎಸ್.‌ ಜಿಯಾವುಲ್ಲಾ, ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್‌, ಕ್ಯಾಂಪ್ಕೋ ಲಿ. ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಲಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ರವಿರಾಜ್‌ ಹೆಗ್ಡೆ, ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ ಪಾಲ್‌ ಎ. ಸುವರ್ಣ, ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಆಡಳಿತಾಧಿಕಾರಿ ಜೆ. ದಿನೇಶ್‌ ಚಂದ್ರ ಹೆಗ್ಡೆ, ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನೀರೆ ರವೀಂದ್ರ ನಾಯಕ್‌, ಕೌಡೂರು ಗ್ರಾ.ಪಂ. ಅಧ್ಯಕ್ಷ ಜಗದೀಶ್‌ ಪೂಜಾರಿ, ಶಾಖಾ ಕಟ್ಟಡ ಮಾಲಕ ರಾಮಕೃಷ್ಣ ಶೆಟ್ಟಿ ಉಪಸ್ಥಿತರಿರುವರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!